Popular Posts

Wednesday, 17 February 2021

ರಥಸಪ್ತಮಿ

 ರಥ ಸಪ್ತಮಿ ಮಹತ್ವ ಮತ್ತು ಪೌರಾಣಿಕ ಹಿನ್ನೆಲೆ

ಬಾಲ್ಯದಲ್ಲಿ ಅಜ್ಜಿ ಪಾಡ್ಯ, ಬಿದಿಗೆ, ತದಿಗೆ... ಅಮಾವಾಸ್ಯೆಯವರೆಗೆ ಕಂಠಪಾಠ ಮಾಡಿಸುವಾಗ ಒಂದೊಂದು ತಿಥಿಗೂ ಒಂದೊಂದು ಹಬ್ಬವನ್ನು ಸೇರಿಸಿ ಹೇಳಿಕೊಡುತ್ತಿದ್ದರು.

ಪಾಡ್ಯ- ಉಗಾದಿ ಪಾಡ್ಯ, ಬಿದಿಗೆ-ಭಾನು ಬಿದಿಗೆ, ತದಿಗೆ-ಅಕ್ಷ ತದಿಗೆ, ಚೌತಿ-ವಿನಾಯಕನ ಚೌತಿ. . . . ಹೀಗೆಸಪ್ತಮಿ ಸರದಿ ಬಂದಾಗ ರಥಸಪ್ತಮಿ ಸೇರಿಕೊಳ್ಳುತ್ತಿತ್ತು.

ಸಮಯ ಸಿಕ್ಕಾಗಲೆಲ್ಲ ಹಬ್ಬಗಳ ಮಹತ್ವದ ಬಗ್ಗೆ ವಿವರಿಸುತ್ತಿದ್ದರು.ಹಬ್ಬಗಳು ಪ್ರತಿವರ್ಷ ಬರುತ್ತವೆ, ಹೋಗುತ್ತವೆ. ಆದರೆ ಅವುಗಳ ಆಚರಣೆಯ ಹಿಂದಿನ ಗೂಢಾರ್ಥ, ವೈಜ್ಞಾನಿಕ ಅಂಶಗಳನ್ನು ಅರಿತಾಗ ಅರ್ಥಪೂರ್ಣ ಆಚರಣೆಯಾಗುತ್ತದೆ.

ಯುಗಾದಿ ಹೊಸತನವನ್ನು ಹೊತ್ತು ತಂದರೆ, ಅದಕ್ಕೂ ಮುನ್ನ ಬರುವ ರಥಸಪ್ತಮಿ ಹಳತರ ಜಾಗದಲ್ಲಿ ಹೊಸತನ್ನು ತಂದಿಟ್ಟು ಬದುಕನ್ನು ಆನಂದಮಯವಾಗಿಸಿಕೊಳ್ಳಲು ಪ್ರೇರೇಪಿಸುತ್ತದೆ.

 ಮಾಘ ಮಾಸದ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು ದಿನ ಸೂರ್ಯ ಹಳೆಯ ರಥವನ್ನು ಬಿಟ್ಟು ಹೊಸ ರಥ ಹತ್ತುತ್ತಾನಂತೆಅಂತ ಅಜ್ಜಿ ಹೇಳುತ್ತಿದ್ದುದು ನೆನಪಾಗುತ್ತದೆ.

ಅಲ್ಲದೆ ದಿನವನ್ನು ಸೂರ್ಯನ ಜನ್ಮದಿನವೆಂದೂ ಪ್ರಾಜ್ಞರು ಹೇಳುತ್ತಾರೆ.

ಯಾವುದೇ ವಸ್ತು ಹಳೆಯದಾದ ಮಾತ್ರಕ್ಕೆ ಬದುಕು ಹಳತಾಗದು. ಅದು ನಿತ್ಯ ನವೀನ.

ಹೀಗಾಗಿಯೇ ದೇಹ ಹಳತಾದಂತೆ ಹಳೆಯ ಬಟ್ಟಿ ಕಳಚಿ ಹೊಸದನ್ನು ಧರಿಸಿದಂತೆ ಅದನ್ನು ವಿಸರ್ಜಿಸಿ ಆತ್ಮ ಹೊಸತನ್ನು ಪಡೆಯುತ್ತದೆ ಎಂಬ ನಂಬಿಕೆಯಿದೆ.

ಸೂರ್ಯನೂ ಹಾಗೆಯೇ, ಪ್ರತಿವರ್ಷ ರಥ ಬದಲಿಸಿ ತನ್ನ ಕಾರ್ಯವನ್ನು ಚುರುಕುಗೊಳಿಸುತ್ತಾನೆ.

ತನ್ಮೂಲಕ ಭುವಿಯ ನಿವಾಸಿಗಳಿಗೆ ಚೈತನ್ಯ ನೀಡುತ್ತಾನೆ.

ಹಿನ್ನೆಲೆಯಲ್ಲಿ ಆತನನ್ನು ಗೌರವಿಸುವ ಸಲುವಾಗಿ ನಾಳೆ (ಮಾಘ ಮಾಸ, ಶುಕ್ಲಪಕ್ಷದ ಸಪ್ತಮಿ ತಿಥಿ-ಗುರುವಾರ) ದೇಶಾದ್ಯಂತ ರಥಸಪ್ತಮಿ ಆಚರಿಸಲಾಗುತ್ತಿದೆ.

ಆರೋಗ್ಯಂ ಭಾಸ್ಕರಾದಿಚ್ಛೇತ್...

ಚಳಿಗಾಲದಲ್ಲಿ ಮುದುಡುವ ಶರೀರ, ರಥಸಪ್ತಮಿಯ ಬಳಿಕ ಸೂರ್ಯನ ಶಾಖದಿಂದಾಗಿ ನವಚೈತನ್ಯ ತುಂಬಿಕೊಳ್ಳುತ್ತದೆ. ‘

ಆರೋಗ್ಯಂ ಭಾಸ್ಕರಾದಿಚ್ಛೇತ್ಅಂದರೆ ಸೂರ್ಯ ಆರೋಗ್ಯದಾಯಿ. ವೈಜ್ಞಾನಿಕವಾಗಿಯಯೂ ಇದು ಸಾಬೀತಾಗಿದೆ.

ಹಸುಗೂಸಿನ ಕಣ್ಣುಗಳು ಸಾಮಾನ್ಯವಾಗಿ ಹಳದಿ ಬಣ್ಣಕ್ಕೆ ತಿರುಗಿದ ಸಂದರ್ಭದಲ್ಲಿ ಪ್ರತಿದಿನ ಎಳೆಬಿಸಿಲಿಗೆ ಮಗುವನ್ನು ಮಲಗಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ.

ಚಂದ್ರನ ಬೆಳಕಿನಲ್ಲಿ ವಿಟಮಿನ್ಬಿ 12’ ಇದ್ದರೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ಡಿಹೇರಳವಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ.

ಹೀಗಾಗಿಯೇ ಪ್ರತ್ಯಕ್ಷವಾಗಿ ಕಾಣುವ ದೈವಸ್ವರೂಪಿ ಸೂರ್ಯನ ಆರಾಧನೆಗೆ ವಿಗ್ರಹಾರಾಧ ನೆ ಬಳಕೆಗೆ ಬರುವ ಮುಂಚಿನಿಂದಲೂ ಪ್ರಾಶಸ್ತ್ಯವಿದೆ.

ಆಹಾರಕ್ಕಾಗಿ, ರೋಗ ನಿವಾರಣೆಗಾಗಿ ಸೂರ್ಯೋಪಾಸನೆ ಮಾಡಬೇಕೆಂದು ಸ್ಕಂದ, ವರಾಹ ಪುರಾಣಗಳಲ್ಲಿಯೂ ಹೇಳಲಾಗಿದೆ.

ರೋಗ ನಿವಾರಣೆ, ದೇಹದಾರ್ಡ್ಯ ಹಾಗೂ ಆರೋಗ್ಯವನ್ನು ಬಯಸುವವರು ಸೂರ್ಯನ ಆರಾಧನೆ ಮಾಡಬೇಕೆಂಬ ನಿಯಮವಿದೆ.

ರೋಗಾಣುಗಳನ್ನು ನಾಶ ಪಡಿಸುವ ಶಕ್ತಿ ಸೂರ್ಯನ ಕಿರಣಗಳಲ್ಲಿವೆ. ಬೆಳಗಿನ ಹಾಗೂ ಸಂಜೆಯ ಸೂರ್ಯ ಕಿರಣಗಳಿಂದ ಆರೋಗ್ಯ ವರ್ಧನೆಯಾಗುತ್ತದೆ.

ರೋಗದಿಂದ ನರಳುವವರು ರಥಸಪ್ತಮಿಯ ದಿನದಿಂದಲಾದರೂ ಸೂರ್ಯಾರಾಧನೆಯನ್ನು ಮಾಡಿದರೆ ಅರ್ಥಾತ್ ಆತನ ಕಿರಣಗಳಿಗೆ ಸೂಕ್ತ ವೇಳೆಯಲ್ಲಿ ಮೈಯೊಡ್ಡಿದರೆ ಬೇಗ ಗುಣಹೊಂದುತ್ತಾರೆ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ.

ಸೂರ್ಯರಾಧನೆಯನ್ನು ಮುಖ್ಯವಾಗಿ ಭಾರತ, ಮಧ್ಯ ಆಫ್ರಿಕಾ, ಈಜಿಪ್ಟ್‌, ಗ್ರೀಸ್ ಹಾಗೂ ಮಧ್ಯ ಏಷ್ಯಾಗಳಲ್ಲಿ ಆಚರಿಸಲಾಗುತ್ತಿದೆ.

108 ಸೂರ್ಯ ನಮಸ್ಕಾರ ಯೋಗಾಸನಗಳಲ್ಲಿ ಮೊದಲ ಪ್ರಾಶಸ್ತ್ಯ ಸೂರ್ಯನಮಸ್ಕಾರಕ್ಕಿದೆ.

ಏಕೆಂದರೆ ಅಭ್ಯಾಸವು ಮನಸ್ಸು, ದೇಹ ಮತ್ತು ಉಸಿರಾಟ ವ್ಯವಸ್ಥೆಗಳಿಗೆ ವಿಶೇಷವಾಗಿ ಪರಿಣಾಮಕಾರಿಯಾಗಿದೆ.

ಭೂಮಿಯಲ್ಲಿನ ಸಕಲ ಜೀವರಾಶಿಗಳ ಚಟುವಟಿಕೆಗಳ ಸೂರ್ಯನಿಂದ ನಡೆಯುತ್ತಿದೆ. ಸೂರ್ಯನಿಲ್ಲದೆ ಜೀವನ ಅಸ್ತಿತ್ವ ಇರಲು ಸಾಧ್ಯವಿಲ್ಲ.

ಹೀಗಾಗಿ ರಥಸಪ್ತಮಿಯಂದು 108 ಸೂರ್ಯ ನಮಸ್ಕಾರಗಳು ಹಾಗೂ ಸಪ್ತಾಶ್ವಗಳ ಪ್ರತೀಕವಾಗಿ ಸಪ್ತ ನಮಸ್ಕಾರಗಳನ್ನು ಮಾಡುವ ಅಭ್ಯಾಸವಿದೆ.

ಪೌರಾಣಿಕ ಹಿನ್ನೆಲೆಯೇನು

ದ್ವಾಪರ ಯುಗದಲ್ಲಿ ಶ್ರೀ ಕೃಷ್ಣನು ಧರ್ಮರಾಜನಿಗೆ ರಥಸಪ್ತಮಿ ಬಗ್ಗೆ ಹೇಳಿದ ಕಥೆಯಿದೆ.

ಯಶೋವರ್ಮನೆಂಬ ರಾಜನಿಗೆ ಹುಟ್ಟಿದ ಮಗನಿಗೆ ಹುಟ್ಟಿನಿಂದಲೇ ರೋಗಿಷ್ಠನಾಗಿದ್ದ.

ಬಗ್ಗೆ ಜ್ಯೋತಿಷಿಗಳಿಂದ ಮಾಹಿತಿ ಪಡೆದು ಸಂಚಿತಕರ್ಮದಿಂದ ಬಂದಿರುವ ಕಾಯಿಲೆಗೆ ರಥಸಪ್ತಮಿ ವ್ರತ ಚರಿಸಲು ಹೇಳಿದ್ದರು.

ಅದರಂತೆ ಅಂದು ಸೂರ್ಯಾರಾಧನೆ ಮಾಡಲಾಗಿ ರಾಜ ಪುತ್ರನು ಆರೋಗ್ಯವಂತನೂ, ಪ್ರಭಾವಶಾಲಿಯೂ ಆದನು.

ಅಲ್ಲದೆ ಪಾಂಡವರು ವನವಾಸದ ಅವಧಿಯಲ್ಲಿ ಶ್ರೀಕೃಷ್ಣನ ಆದೇಶದಂತೆ ಸೂರ್ಯಾರಾಧನೆ ಮಾಡಿ ಆತನಿಂದ ಅಕ್ಷಯ ಪಾತ್ರೆ ಪಡೆದಿದ್ದರು.

 

ಅಲ್ಲದೆ ರಾವಣನ್ನು ಗೆಲ್ಲಬೇಕಾದರೆ ಶ್ರೀರಾಮನೂ ಕೂಡ ಅಗಸ್ತ್ಯರ ಉಪದೇಶದಂತೆ ಆದಿತ್ಯಹೃದಯದ ಮೂಲಕ ಸೂರ್ಯನ ಆರಾಧನೆ ಮಾಡಿದನೆಂದು ರಾಮಾಯಣದಲ್ಲಿ ಹೇಳಿದೆ.

ಸೂರ್ಯಾರಾಧನೆ ಮಾಡಿ, ಚಿನ್ನ ನೀಡುವ ಶಮಂತಕಮಣಿ ಪಡೆದ ಸತ್ರಾಜಿತನ ಕಥೆ ಹರಿವಂಶದಲ್ಲಿ ಬಂದಿದೆ.

 ಮಯೂರನೆಂಬ ಕವಿ ಸೂರ್ಯಶತಕವೆಂಬ ಗ್ರಂಥ ಬರೆದು ಕಳೆದುಕೊಂಡ ಕಣ್ಣನ್ನು ಮತ್ತೆ ಪಡೆದನೆಂದು ಹೇಳುತ್ತಾರೆ.

ಶ್ರೀರಾಮ ಸೂರ್ಯವಂಶದವನಾದರೆ ಕರ್ಣ, ಸುಗ್ರೀವ, ನವಗ್ರಹಗಳಲ್ಲಿ ಶನಿ ಹಾಗೂ ಯಮ ಸೂರ್ಯನ ಪುತ್ರರಾಗಿದ್ದಾರೆ.

 

ರಥಸಪ್ತಮಿಯಂದು ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಮುಂತಾದೆಡೆ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ನೀಡಿದರೆ ಪೂರ್ವ ಜನ್ಮದ ಪಾಪಗಳು ಹಾಗೂ ಜನ್ಮದ ಸಕಲ ದುಃಖಗಳು ಪರಿಹಾರವಾಗುತ್ತವೆ.

ಸೂರ್ಯೋದಯಕ್ಕೆ ಮಾಡುವ ಮಾಘಸ್ನಾನ ತುಂಬಾ ಪುಣ್ಯಪ್ರದವಾದುದು. ಆಯುಷ್ಯ, ಆರೋಗ್ಯಸಂಪತ್ತು ಲಭಿಸುವುದಲ್ಲದೇ, ಸೂರ್ಯನ ಅನುಗ್ರಹ ಪ್ರಾಪ್ತಿಯಾಗುತ್ತದೆಂದು ಪುರಾಣಗಳು ಸಾರಿ ಸಾರಿ ಹೇಳುತ್ತಿವೆ.

ಸೂರ್ಯನ ಆರಾಧನೆ ಋಗ್ವೇದದ ಕಾಲದಿಂದಲೂ ಪ್ರಚಲಿತದಲ್ಲಿದೆ.

ಪ್ರಾಚೀನ ವೈದಿಕ ಧರ್ಮದಲ್ಲಿ ಸೂರ್ಯನಿಗೆ ಅತ್ಯಂತ ಪ್ರಾಮುಖ್ಯತೆ ಇತ್ತು. ಆತನ ಆರಾಧನೆಯಿಂದಲೇ ಸೌರ ಪಂಥ ಹುಟ್ಟಿದ್ದು. ಕಾಲ ಗಣನೆಯಲ್ಲಿ ಸೌರಮಾನ ಎಣಿಕೆ ಇಂದಿಗೂ ಇದೆ.

ಇನ್ನು, ‘ಭೂರ್ಭುವಸ್ವಃ'. . . ಎಂಬಮಂತ್ರದಲ್ಲಿ  ಗಾಯತ್ರಿ ಮಂತ್ರದಲ್ಲಿನ ಪ್ರತಿಶಬ್ದವು ಸೂರ್ಯನ ಸಾಮರ್ಥ್ಯಗಳನ್ನು ಕೊಂಡಾಡುತ್ತದೆ.

ಎಕ್ಕದೆಲೆಯ ಸ್ನಾನ ಸೂರ್ಯನ ಕಿರಣಗಳಲ್ಲಿನ ಸತ್ವಗಳನ್ನು ಹೀರಿಕೊಂಡಿರುವ ಅರ್ಕದೆಲೆ ಅಥವಾ ಎಕ್ಕದೆಲೆಗಳನ್ನು ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲಿರಿಸಿ ಸ್ನಾನ ಮಾಡುವುದು ರಥಸಪ್ತಮಿಯ ವಿಶೇಷತೆಗಳಲ್ಲೊಂದು.

ಎಕ್ಕದ ಎಲೆಗಳಿಗೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು, ರೋಗಗಳನ್ನು ನಿವಾರಿಸುವ ಸಾಮರ್ಥ್ಯವಿದೆ, ಅಷ್ಟೇ ಅಲ್ಲದೇ, ದೇಹದಲ್ಲಿನ ಕೀಲು ನೋವು, ಹಲ್ಲು ನೋವು, ಹೊಟ್ಟೆ ನೋವುಗಳಿಗೂ ಸಹ ಎಕ್ಕದ ಗಿಡ, ಅದರ ಎಲೆಗಳಲ್ಲಿರುವ ಔಷಧೀಯ ಅಂಶಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಹೀಗಾಗಿಯೇ ದಿನ ಎಕ್ಕದೆಲೆಯ ಸ್ನಾನಕ್ಕೆ ಮಹತ್ವ ನೀಡಲಾಗಿದೆ.

ದೇವರೆಲ್ಲಿದ್ದಾನೆ ಎಂದು ಪ್ರಶ್ನಿಸುವ ಬದಲು ಪ್ರತ್ಯಕ್ಷವಾಗಿ ಕಾಣುವ ದೈವೀ ಸ್ವರೂಪಗಳಾದ, ಯಾವುದೇ ಜಾತಿಭೇದ, ಧರ್ಮದ ಚೌಕಟ್ಟಿಲ್ಲದ ಸೂರ್ಯ, ಚಂದ್ರ, ವೃಕ್ಷ, ಬೆಟ್ಟ, ನದೀನದಗಳ ಆರಾಧನೆಯನ್ನು ನಮ್ಮ ಪೂರ್ವಿಕರು ಆಚರಣೆಗೆ ತಂದಿರುವುದು ಎಷ್ಟೊಂದು ಅರ್ಥಪೂರ್ಣವಾಗಿದೆಯಲ್ಲವ?

ಸಪ್ತ ಸಪ್ತ ಮಹಾಸಪ್ತ

ಸಪ್ತ ದ್ವೀಪ ವಸುಂಧರ

ಸಪ್ತಾರ್ಕ ಪ್ರಣಮಾಧ್ಯಾಯ

ಸಪ್ತಮಿ ರಥ ಸಪ್ತಮಿ

ಎಂದು ಶ್ಲೋಕವನ್ನು ಹೇಳಿಕೊಂಡು  ತಲೆಗೆ ಸ್ನಾನ ಮಾಡಿದರೆ ಓಳ್ಳಯದು

ಮೇಲಿನ ಎಲ್ಲಾ ಸಂಗತಿಗಳನ್ನು ಓದಿ, ನಿಮ್ಮ  ಕುಟುಂಬ, ಬಂದು, ಬಳಗ, ಮತ್ತು ವಿಶೇಷ ವಾಗಿ ಇಂದಿನ ಮಕ್ಕಳಿಗೆ ಮನವರಿಕೆ ಮಾಡಿ.

ನಮ್ಮ ಸಂಸ್ಕೃತಿ ಉಳಿಸಲು ನಿಮ್ಮ ಕೊಡುಗೆ ಇರಲಿ.

Thursday, 4 February 2021

ವಯೋಜನ್ಯ ಸಮಸ್ಯೆಗಳು

 ವಯೋಜನ್ಯ ಸಮಸ್ಯೆಗಳು 

ಇಲ್ಲಿಯವರೆಗೆ ಮಾನವನ ಜೀವನ ವಿಧಾನ, ಅದರಿಂದಾಗತಕ್ಕ ಅನಾರೋಗ್ಯ, ಅದಕ್ಕೆ ಕಾರಣ ಹೇಳುತ್ತಾ ಬಂದು ಈಗ ಮರಣಪ್ರಶ್ನವೆಂಬ ಕೊನೆಯ ಅನಾರೋಗ್ಯ ಕಾರಣ ವಿವರಿಸಲಾಗುತ್ತದೆ. 

ಅಲ್ಲಿ ಪ್ರತಿಯೊಬ್ಬ ಮನುಷ್ಯನೂ ಸಾಧಿಸಬೇಕಾದ ಸುಖಮರಣವೆಂಬ ಸೂತ್ರ ಮಂಡಿಸಲಾಗಿದೆ. ಆ ಸುಖಮರಣ ಹೇಗೆ ಎಂಬುದನ್ನು ತಿಳಿಸುತ್ತೇನೆ.


🕉️ಮೊದಲನೆಯದಾಗಿ, ಮಾನವ ಹುಟ್ಟುವಾಗಲೇ ತನಗೆ ಸಾವಿದೆ ಎನ್ನುವ ಸತ್ಯ ತಿಳಿದಿದೆ ತಾನೆ? ಹಾಗಿದ್ದಾಗ ಸಾವು ನಿಶ್ಚಿತವೆಂದ ಮೇಲೆ ಸಾಯುವಲ್ಲಿಯವರೆಗೆ ಮಾತ್ರ ನಮ್ಮ ಸಾಧನೆ, ಯಶಸ್ಸಿಗೆ ಪೂರಕವೆಂಬ ಸತ್ಯ ಅರಿತಿರಬೇಕು.


🕉️ ಎರಡನೆಯದಾಗಿ, ಸಾವು ಭಯಾನಕವೆಂಬ ಕಲ್ಪನೆ ಹುಟ್ಟುವುದು ಬಾಂಧವ್ಯದ ಪ್ರಬಲ ಬೆಸುಗೆಯಿಂದ ಮಾತ್ರ. 

ಸಂಬಂಧ ಬೆಸುಗೆಯು ಕರ್ತವ್ಯಪ್ರಜ್ಞೆಯೊಂದಿಗೆ ಹೊಂದಿಸಿಕೊಂಡಲ್ಲಿ ನಿಮ್ಮ ಮಾನವ ಸಂಬಂಧೀ ಬಾಂಧವ್ಯ ಮತ್ತು ವಸ್ತು ಸಂಬಂಧೀ ಬಾಂಧವ್ಯ ಸುಧಾರಿಸಿಕೊಳ್ಳಲು ಸಾಧ್ಯ. ಆಗ ಸಾವು ಭಯಾನಕವೆನಿಸುವುದಿಲ್ಲ.


🕉️ಮೂರನೆಯದಾಗಿ, ಸಾವು ತ್ರಾಸದಾಯಕವೆಂಬ ಕಲ್ಪನೆ, ನೋವು, ದುಃಖ, ರೋಗಬಾಧೆ, ಕರ್ತವ್ಯ ಲೋಪದ ಪ್ರಜ್ಞೆ, ಪಾಪಪ್ರಜ್ಞೆ ಇವೆಲ್ಲಾ ಕಾಡುವುದು ಅಲ್ಲಿ ನ್ಯೂನತೆ ಇದ್ದಾಗ ಮಾತ್ರ. 

ಆದ್ದರಿಂದ ಪರಿಶುದ್ಧ ಜೀವನ ನಡೆಸಿ. ಆಗ ಈ ಪಾಪಪ್ರಜ್ಞೆ ನಿಮ್ಮನ್ನು ಕಾಡಲಾರವು, ತ್ರಾಸದಾಯಕ ಮರಣ ಪ್ರಾಪ್ತವಾಗಲಾರದು.

🕉️ನಾಲ್ಕನೆಯದಾಗಿ, ಹಂಚಿ ತಿನ್ನುವ ಪ್ರವೃತ್ತಿ ನಿಮ್ಮದಾಗಿದ್ದರೆ, ನಿಮ್ಮ ಎಲ್ಲಾ ಸಂದರ್ಭಗಳಲ್ಲೂ ಈ ಹಂಚುವಿಕೆಯ ಕಾರ್ಯ ನಿರ್ವಹಿಸುತ್ತದೆ.

 ಹಾಗಾಗಿ ನಮ್ಮ ನಂತರ ಮುಂದೇನು ಎನ್ನುವ ಪ್ರಶ್ನೆ ಉದ್ಭವಿಸುವುದಿಲ್ಲ. ಹಾಗಾಗಿ ಸರ್ವಜ್ಞ ವಚನದ "ಕೊಟ್ಟದ್ದು ತನಗೆ ಬಚ್ಚಿಟ್ಟದ್ದು ಪರರಿಗೆ, ಕೊಟ್ಟು ನಾ ಕೆಟ್ಟನೆಂದೆನ ಬೇಡ ಸರ್ವಜ್ಞ" ಎಂಬಂತೆ ಎಲ್ಲವನ್ನೂ ಹಂಚಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಿ. ಆಗ ಅನಾಥ ಪ್ರಜ್ಞೆ ಹುಟ್ಟುವುದಿಲ್ಲ.


🕉️ಈ ನಾಲ್ಕು ವಿಧಾನಗಳನ್ನು ತುಲನೆ ಮಾಡಿದಾಗ ನಮಗೆ ಮರಣವೆಂದರೇನು ಎಂದು ಅರ್ಥವಾಗುತ್ತದೆ. 


🕉️ದೇಹ ಆತ್ಮಗಳ ಸಂಬಂಧ ಕಡಿದುಕೊಳ್ಳುವುದು ಮರಣವಲ್ಲ. ದೇಹ ನಾಶವಾದರೂ ಈ ಭುವಿಯ ಬಂಧದಿಂದ ಬಿಡಿಸಿಕೊಂಡು ಸ್ವತಂತ್ರತೆಯನ್ನು ಪಡೆಯುವುದು. ಅಲ್ಲಿ ಕಲಂಕವಿರದೇ ಇರುವಂತೆ ಬದುಕಿರುವುದು. 


🕉️ಕಲಂಕಿತನಾಗಿದ್ದು ದೇಹದೊಂದಿಗೇ ಇದ್ದರೂ ಕೂಡ ಅದು ಮರಣವೆಂದು ಕರೆಯಲ್ಪಡುತ್ತದೆ. ಹಾಗಾಗಿ ತನ್ನ ಜೀವನದಲ್ಲಿ 


🌸ಶುದ್ಧತೆ, 

🌸ಬದ್ಧತೆ, 

🌸ತ್ಯಾಗ, 

🌸ಸಹನೆ, 

🌸ಧರ್ಮನಿಷ್ಠೆ, 

🌸ದೇಶಭಕ್ತಿ, 

🌸ಮಾತೃಭಕ್ತಿ, 

🌸ಪಿತೃಭಕ್ತಿ, 

🌸ಗುರುಭಕ್ತಿ, 

🌸ಸಮಾಜಪ್ರೇಮ, 

🌸ಪ್ರಕೃತಿಪ್ರೇಮ, 

🌸ಕರ್ತವ್ಯ, 

🌸ಸತ್ಯ, 

🌸ನ್ಯಾಯ 


ಇವನ್ನು ರೂಢಿಸಿಕೊಂಡಲ್ಲಿ "ಮಾನವನಿಗೆ ಮರಣವೇ ಬಾರದು". ದೇಹ ಬಿಡುವುದು ಅನಿವಾರ್ಯ. ಆದರೆ ಆತನಿಗೆ ಸಾವಿಲ್ಲ ಅರ್ಥಾತ್ "ಮರಣವಿಲ್ಲ".


🕉️ಆದ್ದರಿಂದ ಮನುಷ್ಯ ಮಿತಾಹಾರಿಯಾಗಿ ಸಮಾಜಕ್ಕೆ ತನ್ನ ಋಣವನ್ನು ತೀರಿಸುತ್ತಾ ನಿಷ್ಕಳಂಕನಾಗಿ ಬದುಕುವುದೇ ಗುರಿ. 


🕉️ಹಾಗೆ ಬದುಕಿದಲ್ಲಿ ಮರಣಕ್ಕೆ ಹೆದರಬೇಕಾದ್ದಿಲ್ಲ. ಅಂದರೆ ಸಾವಿನ ಭಯವಿಲ್ಲ. ಜ್ಯೋತಿರಾಯುರ್ವೇದ ಎಂದರೆ ಮನುಷ್ಯ ಜೀವನದ ಮೇಲೆ ಬೆಳಕು ಚೆಲ್ಲಿ ಸನ್ಮಾರ್ಗದರ್ಶನ ಮಾಡುವ ಒಂದು ಸಿದ್ಧಾಂತ. ಅಲ್ಲಿ ಬದುಕುವ ಬಗೆಯನ್ನು ವಿವರವಾಗಿ ವಿವರಿಸಿದೆ. ಅದನ್ನು ಮುಂದಿನ ಲೇಖನದಲ್ಲಿ ವಿವರಿಸುತ್ತೇನೆ.

                                                                                                            ಕೃಪೆ - ಅಂತರ್ಜಾಲ

Tuesday, 2 February 2021

ಹೊಸ್ತಿಲ ನಮಸ್ಕಾರಕ್ಕೆ ಹೇಳುವ ಶ್ಲೋಕ


🕉️  ಹೊಸ್ತಿಲ ನಮಸ್ಕಾರಕ್ಕೆ ಹೇಳುವ ಶ್ಲೋಕ 🕉️

ಹ್ರೀಂಕಾರರೂಪಿಣೀ ದೇವಿ ವೀಣಾ ಪುಸ್ತಕಧಾರಿಣೀ |
ವೇದಮಾತರ್ನಮಸ್ತುಭ್ಯಂ ಮಾಂಗಲ್ಯಂ ದೇಹಿ ಮೇ ಸದಾ ||

ಮಾಂಗಲ್ಯಾಭರಣೈರ್ಯುಕ್ತೇ ಮಂಗಳೇ ಸರ್ವಮಂಗಳೇ |
ಗೃಹಲಕ್ಷ್ಮಿರ್ಧಾನ್ಯಲಕ್ಷ್ಮಿರ್ದ್ವಾರಲಕ್ಷ್ಮಿರ್ನಮೋಽಸ್ತುತೇ ||

🕉️🌟ಸ್ತ್ರೀಯರಿಗೆ ಲಕ್ಷ್ಮಿದೇವಿಯ ಆರಾಧನೆಗೆ ಹಲವು ಪ್ರತೀಕಗಳಿವೆ. ಅವುಗಳಲ್ಲಿ, ಹೊಸ್ತಿಲು ಮತ್ತು ತುಳಸೀವೃಂದಾವನ ಪೂಜೆ ಪ್ರಮುಖವಾದವು.

🕉️🌟ಮನೆಯ ಮುತ್ತೈದೆಯರೆಲ್ಲರೂ ಹೊಸ್ತಿಲಿನಲ್ಲಿ ಲಕ್ಷ್ಮೀಭಾರತಿಯರನ್ನು ಪೂಜಿಸಬೇಕು. 

🕉️🌟ಹೊಸ್ತಿಲು ಮತ್ತು ತುಳಸೀವೃಂದಾವನ ಪೂಜೆಯನ್ನು ಕನ್ಯೆಯರೂ ಕಡ್ಡಾಯವಾಗಿ ಮಾಡತಕ್ಕದ್ದು. ಸ್ನಾನಕ್ಕೆ ಮೊದಲೇ ಹೊಸ್ತಿಲು ಬಳಿದು, ಸ್ವಸ್ತಿಕೆ ಬರೆದು, ಅಲಂಕರಿಸಿ ಸ್ನಾನಾನಂತರ ಪೂಜಿಸಬಹುದು. 

🕉️🌟ಕೆಲವೆಡೆ ಸ್ನಾನಾನಂತರ ಹೊಸ್ತಿಲು ಬರೆಯುವ ಸಂಪ್ರದಾಯವಿದೆ. ಶಾಸ್ತ್ರರೀತ್ಯಾ ಸ್ನಾನಾನಂತರದ ಹೊಸ್ತಿಲಪೂಜೆ ಉತ್ತಮ. 

🕉️🌟ಶುದ್ಧಜಲಪೂರ್ಣವಾದ ತಂಬಿಗೆಯನ್ನು ಹೊಸ್ತಿಲ ಮಧ್ಯದಲ್ಲಿಟ್ಟು ಮಂಗಳದ್ರವ್ಯಗಳಿಂದ ಪೂಜಿಸಿ, “ಹ್ರೀಂಕಾರರೂಪಿಣೀ...” ಎಂಬ ಶ್ಲೋಕಗಳಿಂದ ನಮಸ್ಕರಿಸಿ, ಹೊಸ್ತಿಲಿಗೆ ಅರ್ಪಿಸಿದ್ದ ಒಂದು ಹೂವನ್ನು ಮುಡಿದುಕೊಂಡು, ಕೈತೊಳೆದು, ತಂಬಿಗೆಯನ್ನು ಕೆಳಗಿಳಿಸಬೇಕು (ಹೊಸ್ತಿಲುಪೂಜೆ ಮುಗಿಯುವ ತನಕ ಯಾರೂ ಹೊಸ್ತಿಲು ದಾಟಬಾರದು,).

🕉️🌟ಗೃಹದ ಪ್ರಧಾನದ್ವಾರವನ್ನು ಹೊಸ್ತಿಲುಪೂಜೆಗಾಗಿ ಆರಿಸಿಕೊಳ್ಳಬೇಕು. ಅನುಕೂಲತೆ ಹಾಗೂ ಶುದ್ಧಿಯ ಕಾರಣಗಳಿಂದ ದೇವರ ಕೋಣೆಯ ದ್ವಾರವನ್ನು ಪೂಜಿಸಿದರೂ, ಪ್ರಧಾನದ್ವಾರದಲ್ಲೂ ರಂಗೊಲಿ ಇರಬೇಕು.

🕉️🌟 ”ಅಶೂನ್ಯಾ ದೇಹಲೀ ಕಾರ್ಯಾ...” ಎಂಬಂತೆ ಹೊಸ್ತಿಲು ಬೋಳಾಗಿರಕೂಡದು. ಕಸಕಡ್ಡಿಗಳಿಂದ ತುಂಬಿರಕೂಡದು. ಗೃಹವಸ್ತುಗಳನ್ನು ಹೊಸ್ತಿಲಲ್ಲಿಡಕೂಡದು. ಮನೆಯೊಳಗಿದ್ದೇ ಹೊಸ್ತಿಲ ಪೂಜೆಯನ್ನು ಮಾಡಬೇಕು. 

🕉️🌟ಹೊರಗಿನಿಂದ ಒಳಮುಖವಾಗಿ ಮಾಡಬಾರದು. ಆದರೂ ಲಕ್ಶ್ಮೀದೇವಿಯನ್ನು ಬರಮಾಡಿಕೊಳ್ಳುವಾಗ, ಹೊಸ್ತಿಲ ಹೊರಗೆ ನಿಂತು ಆಕೆಯನ್ನು ಆಹ್ವಾನಿಸುವ ಮತ್ತು ಆವಾಹಿಸುವ ಸಂಪ್ರದಾಯವು ಕೆಲವೆಡೆ ಪ್ರಚಲಿತವಾಗಿರುತ್ತದೆ. 

🕉️🌟ಯಾವುದೇ ಪೂಜೆಯಲ್ಲೂ ಶ್ರದ್ಧೆ, ಭಕ್ತಿ ಮತ್ತು ಅನುಸಂಧಾನಗಳು ಪ್ರಮುಖವಾಗುತ್ತವೆ. ಕ್ರಮಗಳಲ್ಲಿ ಅಲ್ಪಸ್ವಲ್ಪ ವ್ಯತ್ಯಯಗಳಿದ್ದರೂ ಯಾವುದೇ ಲೋಪವಿರುವುದಿಲ್ಲ.

🕉️🌟ದೇವರ ಕೋಣೆಯ ಹೊಸ್ತಿಲಿಗೆ ಮಾತ್ರ ಹೊರಗಿನಿಂದ ಪೂಜಿಸಬೇಕು.

Courtesy : Whatsapp 

https://chat.whatsapp.com/Eaxg9T2n66JIZJAeHxs1fe

Facebook page
http://www.facebook.com/bramhanapriya